varthabharthi


ಕರಾವಳಿ

ನ.27ರಿಂದ ಪಟ್ಲ ಸತೀಶ್ ನೇತೃತ್ವದ ಪಾವಂಜೆ ಮೇಳದ ತಿರುಗಾಟ ಆರಂಭ

ವಾರ್ತಾ ಭಾರತಿ : 17 Oct, 2020

ಮಂಗಳೂರು, ಅ.17: ಪಾವಂಜೆಯ ಶ್ರೀ ಕ್ಷೇತ್ರದ ವತಿಯಿಂದ ಈ ಬಾರಿ ಹೊಸ ಮೇಳ ತಿರುಗಾಟ ನಡೆಸಲಿದೆ. ತೆಂಕುತಿಟ್ಟು ಯಕ್ಷಗಾನದ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ಪ್ರಧಾನ ಭಾಗವತಿಕೆಯೊಂದಿಗೆ ನವೆಂಬರ್ 27ರಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ, ಪಾವಂಜೆಯ ಮೇಳ ಪ್ರದರ್ಶನ ನೀಡಲಿದೆ ಎಂದು ದೇವಸ್ಥಾನದ ಆಡಳಿತ ್ಚ್ಢಕ್ತೇಸರ ಶಶೀಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಮೇಳದ ಯಕ್ಷಗಾನ ಪ್ರದರ್ಶನವು ಕಾಲಮಿತಿಯದ್ದಾಗಿದ್ದು, ಸಾಮಾನ್ಯವಾಗಿ ಸಂಜೆ 6ರಿಂದ 11ರವರೆಗಿನ ಅವಧಿಯಲ್ಲಿ ನಡೆಯಲಿದೆ. ಈ ಎಲ್ಲ ಪ್ರದರ್ಶನಗಳನ್ನು ಕೋವಿಡ್-19ರ ಪರಿಸ್ಥಿತಿಯಲ್ಲಿ ಸರಕಾರ ನೀಡುವ ನಿರ್ದೇಶನಗಳಿಗೆ ಒಳಪಟ್ಟು ನಡೆಸಲಾಗುವುದು. ಈಗಾಗಲೇ ನೂರಕ್ಕೂ ಅಧಿಕ ಸೇವಾರ್ಥಿಗಳು ಯಕ್ಷಗಾನ ಪ್ರದರ್ಶನ ಮುಂಗಡ ನೋಂದಣಿ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

*ಮೇಳದ ಕಲಾವಿದರು:
 ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ, ಪಾವಂಜೆಯಲ್ಲಿ ಪಟ್ಲ ಸತೀಶ್ ಶೆಟ್ಟಿ ಪ್ರಧಾನ ಭಾಗವತರಾಗಿದ್ದು, ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಸಾಥ್ ನೀಡಲಿದ್ದಾರೆ.

ಹಿಮ್ಮೇಳದಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ ಭಾಗವಹಿಸಲಿದ್ದಾರೆ.

ಹಾಸ್ಯ ಪಾತ್ರಧಾರಿಗಳಾಗಿ ಉಜಿರೆ ನಾರಾಯಣ, ಸಂದೇಶ್ ಮಂದಾರ, ಸ್ತ್ರೀ ಪಾತ್ರದಲ್ಲಿ ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು ಪ್ರಧಾನ ಪಾತ್ರಗಳಲ್ಲಿ ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಮಾನ್ಯ, ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮತ್ತಿತರು ಭಾಗವಹಿಸಲಿದ್ದಾರೆ ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಧರ್ಮದರ್ಶಿ ಡಾ.ಯಾಜಿ ನಿರಂಜನ ಭಟ್ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)