varthabharthi


ಕರ್ನಾಟಕ

ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ: ನಟ ವಿವೇಕ್ ಒಬೆರಾಯ್ ಪತ್ನಿಗೆ ಮತ್ತೆ ನೋಟಿಸ್

ವಾರ್ತಾ ಭಾರತಿ : 17 Oct, 2020

ವಿವೇಕ್ ಒಬೆರಾಯ್

ಬೆಂಗಳೂರು, ಅ.17: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣ ಸಂಬಂಧ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವ ಅವರಿಗೆ ಎರಡನೇ ಬಾರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಪ್ರಕರಣದಲ್ಲಿ ಆದಿತ್ಯ ಆಳ್ವ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಆತನ ಸಹೋದರಿ ಪ್ರಿಯಾಂಕಾ ಆಳ್ವ ಮುಂಬೈ ನಿವಾಸಕ್ಕೆ ಸರ್ಚ್ ವಾರೆಂಟ್ ಪಡೆದು ತೆರಳಿದ್ದ ಸಿಸಿಬಿ ಅಧಿಕಾರಿಗಳು, ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. 

ಇದರ ಬೆನ್ನಲ್ಲೇ ಬೆಂಗಳೂರಿನ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಅ.16ರಂದು ನೋಟಿಸ್ ಜಾರಿ ಮಾಡಿದ್ದರು. ಆದರೆ, ಪ್ರಿಯಾಂಕಾ ವಿಚಾರಣೆಗೆ ಗೈರು ಆಗಿರುವ ಹಿನ್ನೆಲೆ ಮತ್ತೆ ನೋಟಿಸ್ ನೀಡಿರುವ ಸಿಸಿಬಿ ಅಧಿಕಾರಿಗಳು, ಅ.20ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಆದಿತ್ಯ ಆಳ್ವ ವಿರುದ್ಧ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)