varthabharthi


ಕರಾವಳಿ

ಕೋವಿಡ್ ಗೆ ಓರ್ವ ಮಹಿಳೆ ಬಲಿ

ಉಡುಪಿ ಜಿಲ್ಲೆಯ 211ಮಂದಿಯಲ್ಲಿ ಕೊರೋನ ಸೋಂಕು ದೃಢ

ವಾರ್ತಾ ಭಾರತಿ : 17 Oct, 2020

ಉಡುಪಿ, ಅ.17: ಜಿಲ್ಲೆಯಲ್ಲಿ ಶನಿವಾರ ಇನ್ನೂ 211 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ಕುಂದಾಪುರದ 57 ವರ್ಷ ಪ್ರಾಯದ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಶನಿವಾರ ಪಾಸಿಟಿವ್ ಬಂದವರಲ್ಲಿ ಮಕ್ಕಳು ಸೇರಿದಂತೆ 106 ಮಂದಿ ಪುರುಷರು ಹಾಗೂ 105 ಮಂದಿ ಮಹಿಳೆಯರಾಗಿದ್ದಾರೆ. ಇವರಲ್ಲಿ 82 ಪುರುಷರು ಹಾಗೂ 94 ಮಂದಿ ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 62, ಕುಂದಾಪುರ ತಾಲೂಕಿನ 95 ಹಾಗೂ ಕಾರ್ಕಳ ತಾಲೂಕಿನ 46 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಉಳಿದ ಎಂಟು ಮಂದಿ ಹೊರಜಿಲ್ಲೆಗಳಿಂದ ಚಿಕಿತ್ಸೆಗೆಂದು ಬಂದು ಇಲ್ಲಿ ಪಾಸಿಟಿವ್ ಬಂದವರು ಎಂದು ಡಾ.ಸೂಡ ಹೇಳಿದರು.

ಶನಿವಾರ ಪಾಸಿಟಿವ್ ಬಂದವರಲ್ಲಿ ಮಕ್ಕಳು ಸೇರಿದಂತೆ 106 ಮಂದಿ ಪುರುಷರು ಹಾಗೂ 105 ಮಂದಿ ಮಹಿಳೆಯರಾಗಿದ್ದಾರೆ. ಇವರಲ್ಲಿ 82 ಪುರುಷರು ಹಾಗೂ 94 ಮಂದಿ ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 62, ಕುಂದಾಪುರ ತಾಲೂಕಿನ 95 ಹಾಗೂ ಕಾರ್ಕಳ ತಾಲೂಕಿನ 46 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಉಳಿದ ಎಂಟು ಮಂದಿ ಹೊರಜಿಲ್ಲೆಗಳಿಂದ ಚಿಕಿತ್ಸೆಗೆಂದು ಬಂದು ಇಲ್ಲಿ ಪಾಸಿಟಿವ್ ಬಂದವರು ಎಂದು ಡಾ.ಸೂಡ ಹೇಳಿದರು. ದಿನದಲ್ಲಿ ಪಾಸಿಟಿವ್ ಬಂದ 211 ಮಂದಿಯಲ್ಲಿ 30 ಮಂದಿ ಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ 181 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಡಾ.ಸೂಡ ತಿಳಿಸಿದರು.

169 ಮಂದಿ ಗುಣಮುಖ: ದಿನದಲ್ಲಿ ಒಟ್ಟು 169 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 18,578 ಆಗಿದೆ. ಜಿಲ್ಲೆಯಲ್ಲಿ ಸದ್ಯ 1948 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ತಿಳಿಸಿದರು.

1673 ನೆಗೆಟಿವ್: ಜಿಲ್ಲೆಯಲ್ಲಿ ಇಂದು ಒಟ್ಟು 1879 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1673 ಮಂದಿ ನೆಗೆಟಿವ್ ಬಂದಿದ್ದು, 206 ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 20,693 ಆಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,54,860 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,34,167 ಮಂದಿ ನೆಗೆಟಿವ್ ಹಾಗೂ 20,693 ಮಂದಿ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 18,578 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿ ದ್ದಾರೆ. ಈವರೆಗೆ ಒಟ್ಟು 173 ಮಂದಿ ಮೃತಪಟ್ಟಿದ್ದಾರೆ.

ಮಹಿಳೆ ಮೃತ್ಯು: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿನಿಂದ ಕುಂದಾಪುರ ತಾಲೂಕಿನ 57 ವರ್ಷ ಪ್ರಾಯದ ಮಹಿಳೆಯೊಬ್ಬರು ಮೃತ ಪಟ್ಟಿರುವ ವರದಿ ಬಂದಿದೆ. ಹೃದಯದ ಕಾಯಿಲೆ, ಬಹುಅಂಗಗಳ ವೈಫಲ್ಯದ ಹಿನ್ನೆಲೆಯ ಈ ಮಹಿಳೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿದ್ದು, ಅಲ್ಲಿ ಕೋವಿಡ್ ಪರೀಕ್ಷೆ ಪಾಸಿಟಿವ್ ಬಂದ ಬಳಿಕ ಉಸಿರಾಟದ ತೊಂದರೆ ಅನುಭವಿಸಿ ಮೃತಪಟ್ಟಿದ್ದಾರೆ. ಈ ಮೂಲಕ ಕೊರೋನಕ್ಕೆ ಬಲಿಯಾ ದವರ ಸಂಖ್ಯೆ 173 ಆಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)