varthabharthi


ರಾಷ್ಟ್ರೀಯ

ಬಿಹಾರ: ಮಹಾಮೈತ್ರಿ ಕೂಟದಿಂದ ಪ್ರಣಾಳಿಕೆ ಬಿಡುಗಡೆ

ವಾರ್ತಾ ಭಾರತಿ : 17 Oct, 2020

ಪಾಟ್ನಾ, ಅ. 17: ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿ ಕೂಟ ಬಿಹಾರದಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆಯ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆಗೊಳಿಸಿತು. ಮಹಾ ಮೈತ್ರಿ ಕೂಟದ ಪಾಲುದಾರರಾದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇಪಾಲ ಹಾಗೂ ಶಕ್ತಿಸಿನ್ಹ ಗೋಹಿಲ್ ಮೊದಲಾದವರು ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, ಮಹಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಎನ್‌ಡಿಎ ಸರಕಾರ ಜಾರಿಗೆ ತಂದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಲಾಗುವುದು ಎಂದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)