varthabharthi


ಕರ್ನಾಟಕ

ಕಸಾಪ ಚಾವುಡಂರಾಯ ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಆಯ್ಕೆ

ವಾರ್ತಾ ಭಾರತಿ : 18 Oct, 2020

ಬೆಂಗಳೂರು, ಅ.17: ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ 2020ನೇ ಸಾಲಿನ ಚಾವುಂಡರಾಯ ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಆಯ್ಕೆಯಾಗಿದ್ದಾರೆ.

ಶನಿವಾರ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಮನುಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಡಾ.ಬಾಬಾಸಾಹೇಬ ಲೋಕಾಪುರರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಜೈನ ಸಾಹಿತ್ಯದಲ್ಲಿ ಕೃಷಿ ಮಾಡಿದ ಲೇಖಕರಿಗೆ ನೀಡುವ ಈ ಪ್ರಶಸ್ತಿಯು 30ಸಾವಿರ ರೂ.ನಗದು ಪುರಸ್ಕಾರವನ್ನೊಳಗೊಂಡಿದೆ.

ಈ ಆಯ್ಕೆ ಸಮಿತಿ ಸಭೆಯಲ್ಲಿ ಲೇಖಕಿ ಡಾ.ಪದ್ಮಿನಿ ನಾಗರಾಜ್, ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಡಾ.ರಾಜಶೇಖರ ಹತಗುಂದಿ ಉಪಸ್ಥಿತರಿದ್ದರೆಂದು ಕಸಾಪ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)