varthabharthi


ಮಾಹಿತಿ - ಮಾರ್ಗದರ್ಶನ

​ಮೀನುಗಾರಿಕಾ ಕಾಲೇಜಿನಲ್ಲಿ ಉಚಿತ ತರಬೇತಿ-ಆರ್ಜಿ ಆಹ್ವಾನ

ವಾರ್ತಾ ಭಾರತಿ : 20 Oct, 2020

ಮಂಗಳೂರು, ಅ.20: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗಸಂಸ್ಥೆ ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ನ.3ರಿಂದ 30 ರವರೆಗೆ ಮತ್ಸ ಆರೋಗ್ಯ ತಪಾಸಣೆ ಮತ್ತು ಮತ್ಸ-ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನವಾಗಿದೆ. ಅರ್ಜಿಯನ್ನು ವೆಬ್‌ಸೈಟ್: www.cofm.edu.in  ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಡೀನ್, ಮೀನುಗಾರಿಕಾ ಮಹಾವಿದ್ಯಾಲಯ, ಕಂಕನಾಡಿ ಅಂಚೆ, ಮಂಗಳೂರು-575002, ಅಥವಾ ಇಮೇಲ್: deanfisheries@gmail.com ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824-2248936, 9916924084ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)