ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಅ.28: ಉಡುಪಿ ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ದಲ್ಲಿ ಪ್ರಸಕ್ತ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಂ.ಎ (ಇತಿಹಾಸ), ಎಂ.ಎ (ರಾಜ್ಯಶಾಸ್ತ್ರ), ಎಂ.ಕಾಂ, ಎಂ.ಎಸ್ಸಿ (ಗಣಿತ), ಎಂ.ಎಸ್ಸಿ (ರಸಾಯನಶಾಸ್ತ್ರ) ಕೋರ್ಸುಗಳು ಇಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2527955, ಮೊಬೈಲ್ ನಂ.: 9449969818ನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
Next Story