ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಅ.29: ರಾಜ್ಯ ಸರಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಪೊಲೀಸ್ ತರಬೇತಿ ವಿಭಾಗದ ಡಿಜಿಪಿಯಾಗಿ ಪದಮ್ ಕುಮಾರ್ ಗರ್ಗ್, ಸಿಐಡಿ ವಿಶೇಷ ಘಟಕ(ಆರ್ಥಿಕ ಅಪರಾಧ)ದ ಡಿಜಿಪಿಯಾಗಿ ಪಿ.ಎಸ್.ಸಂಧು ಹಾಗೂ ಅಗ್ನಿಶಾಮಕ ದಳ ಹಾಗೂ ಗೃಹ ರಕ್ಷಕ ದಳದ ಡಿಜಿಪಿಯಾಗಿ ಅಮರ್ ಕುಮಾರ್ ಪಾಂಡೆಯವರನ್ನು ವರ್ಗಾವಣೆ ಮಾಡಲಾಗಿದೆ.
Next Story