varthabharthi


ಮಾಹಿತಿ - ಮಾರ್ಗದರ್ಶನ

ಸೈಕ್ಯಾಟ್ರಿಸ್ಟ್ ಹುದ್ದೆಗೆ ನೇಮಕಾತಿ-ಸಂದರ್ಶನ

ವಾರ್ತಾ ಭಾರತಿ : 3 Nov, 2020

ಉಡುಪಿ, ನ.3: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿಯಲ್ಲಿ ಖಾಲಿ ಇರುವ ಸೈಕ್ಯಾಟ್ರಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು, ನವೆಂಬರ್ 9ರಂದು ಬೆಳಗ್ಗೆ 10:30ರಿಂದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)