varthabharthi


ರಾಷ್ಟ್ರೀಯ

ಪಾಕ್‌ನಿಂದ ಅಪ್ರಚೋದಿತ ದಾಳಿ: ಗಡಿಯಲ್ಲಿ ಯೋಧ ಹುತಾತ್ಮ

ವಾರ್ತಾ ಭಾರತಿ : 21 Nov, 2020

ಜಮ್ಮು, ನ. 21: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ನಸುಕಿನಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತವಾಗಿ ಮೋರ್ಟರ್ ಶೆಲ್ ಹಾಗೂ ಸಣ್ಣ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇನ್ನೋರ್ವ ಯೋಧ ಗಾಯಗೊಂಡಿದ್ದಾರೆ.

 ರಾಜೌರಿ ಜಿಲ್ಲೆಯ ನೌಶೇರಾ ವಲಯದ ಲಾಮ್ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ನಸುಕಿನ 1 ಗಂಟೆಗೆ ದಾಳಿ ನಡೆಸಿದ ಪರಿಣಾಮ ಮುಂಚೂಣಿ ಠಾಣೆಯಲ್ಲಿ ಕಾವಲು ಕಾಯುತ್ತಿದ್ದ ಯೋಧ ಪಾಟೀಲ್ ಸಂಗ್ರಾಮ್ ಶಿವಾಜಿ ಗಂಭೀರ ಗಾಯಗೊಂಡು ಮೃತಪಟ್ಟರು.

ಈ ದಾಳಿಯಲ್ಲಿ ಗಾಯಗೊಂಡ ಇನ್ನೋರ್ವ ಯೋಧ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಸೇನಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಹೇಳಿದ್ದಾರೆ.

ಯೋಧ ಶಿವಾಜಿ ಮಹಾರಾಷ್ಟ್ರದ ಕೊಲ್ಹಾಪುರದ ನಿಗಾವೆ ಗ್ರಾಮದ ನಿವಾಸಿ ಎಂದು ಆನಂದ್ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)