varthabharthi


ರಾಷ್ಟ್ರೀಯ

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಆರೋಗ್ಯ ಸ್ಥಿತಿ ಗಂಭೀರ

ವಾರ್ತಾ ಭಾರತಿ : 21 Nov, 2020

ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದಾಗಿ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು,ಉಸಿರಾಡಲು ಕಷ್ಟಪಡುತ್ತಿದ್ದಾರೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.

ಕೋವಿಡ್-19ನಿಂದಾಗಿ ಆರೋಗ್ಯ ಹದಗೆಟ್ಟ ಬಳಿಕ ಕಾಂಗ್ರೆಸ್ ನ 86ರ ವಯಸ್ಸಿನ ಹಿರಿಯ ಮುಖಂಡನನ್ನು ನವೆಂಬರ್ 2 ರಂದು ಗುವಾಹಟಿ ವೈದ್ಯಕೀಯ ಕಾಲೇಜು ಹಾಗೂ ಹಾಸ್ಪಿಟಲ್ (ಜಿಎಂಸಿಎಚ್) ಗೆ ದಾಖಲಿಸಲಾಗಿತ್ತು. ಅವರನ್ನು ಆಕ್ರಮಣಶೀಲ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇಡಲಾಗಿದೆ ಸಚಿವರು ಮಾಹಿತಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)