varthabharthi


ರಾಷ್ಟ್ರೀಯ

ಮಧ್ಯಪ್ರದೇಶದ ಸಚಿವೆ ಇಮಾರ್ತಿ ದೇವಿ ರಾಜೀನಾಮೆ

ವಾರ್ತಾ ಭಾರತಿ : 25 Nov, 2020

ಭೋಪಾಲ್: ಇತ್ತೀಚೆಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಸೋತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮಹಿಳಾ ಹಾಗೂ ಮಕ್ಕಳ ಕಲ್ಯಾಣಸಚಿವೆ ಭಾರತೀಯ ಜನತಾ ಪಕ್ಷದ ನಾಯಕಿ ಇಮಾರ್ತಿ ದೇವಿ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

ದೇವಿ ದಬ್ರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸುರೇಶ್ ರಾಜೆ ವಿರುದ್ಧ 7,633 ಮತಗಳ ಅಂತರದಿಂದ ಸೋತಿದ್ದರು.

ವೀಡಿಯೊ ಮೂಲಕ ಹೇಳಿಕೆ ನೀಡಿರುವ ಮಾಜಿ ಶಾಸಕಿ ದೇವಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ರಾಜೀನಾಮೆ ಸ್ವೀಕರಿಸುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.ಉಪ ಚುನಾವಣೆಯ ಸೋಲಿನ ಕಾರಣಕ್ಕೆ ದೇವಿ ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)