varthabharthi


ರಾಷ್ಟ್ರೀಯ

ಸರಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ಮೃತದೇಹವನ್ನು ನಾಯಿ ತಿನ್ನುತ್ತಿರುವ ದೃಶ್ಯ ವೈರಲ್

ವಾರ್ತಾ ಭಾರತಿ : 26 Nov, 2020

ಲಕ್ನೊ: ಉತ್ತರಪ್ರದೇಶದ ಸಂಭಲ್ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ ಸ್ಟ್ರಚರ್ ಮೇಲೆ ಇರಿಸಲಾದ ಬಾಲಕಿಯ ಮೃತದೇಹವನ್ನು ನಾಯಿಯೊಂದು ಎಳೆದು ತಿನ್ನುತ್ತಿರುವ ಹೃದಯ ವಿದ್ರಾವಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಪಘಾತವೊಂದರಲ್ಲಿ ಮೃತಪಟ್ಟ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಹಿನ್ನೆಲೆಯಲ್ಲಿ ಸಂಭಲ್ ಜಿಲ್ಲಾಸ್ಪತ್ರೆಗೆ ತರಲಾಗಿತ್ತು.

ಆಸ್ಪತ್ರೆಯ ಮೆಟ್ಟಿಲ ಸಮೀಪವಿರುವ ಮೃತದೇಹವನ್ನು ನಾಯಿಯೊಂದು ಎಳೆಯುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಈ ಘಟನೆಯನ್ನು ವ್ಯಕ್ತಿಯೋರ್ವ ಚಿತ್ರೀಕರಿಸಿದ್ದಾನೆ. ಇದು ಸರಕಾರಿ ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಹಿರಂಗಗೊಳಿಸಿದೆ.

ಅಪಘಾತದಲ್ಲಿ ಮೃತಪಟ್ಟ ನನ್ನ ಪುತ್ರಿಯ ಮೃತದೇಹವನ್ನು ಸುಮಾರು ಎರಡು ಗಂಟೆಗಳ ಹಿಂದೆ ಆಸ್ಪತ್ರೆಗೆ ತರಲಾಗಿತ್ತು. ಪುತ್ರಿಯ ಮೃತದೇಹವನ್ನು ನಾಯಿ ತಿನ್ನುತ್ತಿರುವುದು ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯವನ್ನು ಬಹಿರಂಗಗೊಳಿಸಿದೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಈ ನಡುವೆ ಘಟನೆಯ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರೂಪಿಸಲಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ ಅಮಿತಾಭ್ ಸಿಂಗ್ ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)