ವಿಜಯಪುರ: ಮಠದ ಪರಿಸರದಲ್ಲಿ ಗಾಂಜಾ ಗಿಡ ಪತ್ತೆ
ವಿಜಯಪುರ, ನ.28: ಇಲ್ಲಿನ ಯಲ್ಲಾಲಿಂಗ ಮಠದ ಸಮೀಪ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿರುವ ಅಬಕಾರಿ ಪೊಲೀಸರು, 13 ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ಬಸವನಬಾಗೇವಾಡಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಯಲ್ಲಾಲಿಂಗ ಮಠದ ಆವರಣದ ಹಿಂಭಾಗದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗಿತ್ತು ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಒಟ್ಟು 13 ಹಸಿ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಆದರೆ ಗಾಂಜಾ ಬೆಳೆದ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ತನಿಖೆ ಮುಂದುವರಿಸಲಾಗಿದೆ.
Next Story