ದ.ಕ. ಜಿಲ್ಲೆ : ಕೋವಿಡ್ಗೆ ಮತ್ತೋರ್ವ ಬಲಿ; 61 ಮಂದಿಗೆ ಕೊರೋನ ಸೋಂಕು
ಮಂಗಳೂರು, ನ.28: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೋರ್ವ ಬಲಿಯಾಗಿದ್ದಾರೆ. ಹೊಸದಾಗಿ 61 ಮಂದಿಗೆ ಕೊರೋನ ಸೋಂಕು ತಗುಲಿದ್ದು, 44 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 31,848 ಸೋಂಕಿತರ ಪೈಕಿ 30,538 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್ಗೆ 711 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 599 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 14,627 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 15,73,402 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story