ಬಂಟ್ವಾಳ : ನಿಯಂತ್ರಣ ತಪ್ಪಿದ ಲಾರಿ ಪಲ್ಟಿ; ಚಾಲಕ ಮೃತ್ಯು
ಬಂಟ್ವಾಳ : ಲಾರಿಯೊಂದು ಚಲಿಸುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಡ್ಕ ಸಮೀಪದ ಅಮ್ಟೂರು ಕ್ರಾಸ್ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಘನಗಾತ್ರದ ಲಾರಿಯಲ್ಲಿ ಅಧಿಕ ಭಾರದ ಇಲೆಕ್ಟ್ರಿಕಲ್ ವಯರ್ ಗಳನ್ನು (ಕ್ವಾಯಿಲ್) ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಲಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ಘಟನೆಯಲ್ಲಿ ನೆಲ್ಯಾಡಿ ನಿವಾಸಿ ಚಾಲಕ ಅಕ್ರಮ್ ಭಾಷಾ ಗಂಭೀರ ವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಗೊಂಡ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
Next Story