varthabharthi


ರಾಷ್ಟ್ರೀಯ

ರೈತರ ಹೋರಾಟಕ್ಕೆ ಬೆಂಬಲ: ಪದ್ಮ ವಿಭೂಷಣ ಪ್ರಶಸ್ತಿ ವಾಪಸ್ ನೀಡಿದ ಪ್ರಕಾಶ್ ಸಿಂಗ್ ಬಾದಲ್

ವಾರ್ತಾ ಭಾರತಿ : 3 Dec, 2020

ಹೊಸದಿಲ್ಲಿ:ಪಂಜಾಬ್ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ  ಅಕಾಲಿ ದಳದ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಪದ್ಮ ವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡುವುದಾಗಿ ಘೋಷಿಸಿದ್ದಾರೆ.

ರೈತರಿಗೆ ಸರಕಾರವು ದ್ರೋಹ ಬಗೆದಿರುವುದನ್ನು ವಿರೋಧಿಸಿ, ರೈತರ ಪ್ರತಿಭಟನೆಯನ್ನು ಬೆಂಬಲಿಸಿ ನಾನು ಪ್ರಶಸ್ತಿಯನ್ನು ವಾಪಸ್ ಮಾಡುತ್ತಿರುವೆ ಎಂದು ಬಾದಲ್ ಹೇಳಿದ್ದಾರೆ.

ಶಿರೋಮಣಿ ಅಕಾಲಿದಳ (ಡೆಮಾಕ್ರಟಿಕ್) ಮುಖ್ಯಸ್ಥ ಹಾಗೂ ರಾಜ್ಯಸಭಾ ಸಂಸದ ಸುಖ್ ದೇವ್ ಸಿಂಗ್ ಧಿಂಡ್ಸಾ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿ ಪದ್ಮ ಭೂಷಣ ಪ್ರಶಸ್ತಿ ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.

ಶಿರೋಮಣಿ  ಅಕಾಲಿ ದಳ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ತಿಂಗಳುಗಳ ಬಳಿಕ ಈ ನಿರ್ಧಾರ ಕೈಗೊಂಡಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)