varthabharthi


ಕರ್ನಾಟಕ

ಚಿಕ್ಕಮಗಳೂರು: ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ವಾರ್ತಾ ಭಾರತಿ : 5 Dec, 2020

ಚಿಕ್ಕಮಗಳೂರು, ಡಿ.5: ರಾಜ್ಯ ಸರಕಾರ ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನೀಡಿದ್ದ ರಾಜ್ಯ ಬಂದ್ ಕರೆಗೆ ಕಾಫಿನಾಡಿನಲ್ಲಿ ಬೆಂಬಲ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. ವಾಹನಗಳ ಓಡಾಟ ವಿರಳವಾಗಿವೆ.

ಶನಿವಾರ ಬೆಳಗ್ಗೆಯೇ ರಸ್ತೆಗಿಳಿದ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಆಟೋ, ಟ್ಯಾಕ್ಸಿ, ಅಂಗಡಿ ಮುಂಗಟ್ಟು ಬಂದ್ ಮಾಡಿಸಿದರು.

ಅಂಗಡಿ ಮುಂಗಟ್ಟು  ಮಾಲಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನುಮುಚ್ಚಿ ಬಂದ್ ಗೆ  ಬೆಂಬಲ ನೀಡಿದರು.

ಕೆಎಸ್ಸಾರ್ಟಿಸಿ ಬಸ್ ಗಳು ಎಂದಿನಂತೆ ಓಡಾಟ ನಡೆಸಿದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.

ಕನ್ನಡಪರ, ರೈತಪರ, ಪ್ರಗತಿಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದ್ ಗೆ ಸಾಥ್ ನೀಡಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)