ಕರ್ನಾಟಕ
ಹೈಕೋರ್ಟ್ ಸೂಚನೆ ನೀಡಿದರೆ ಗೋಹತ್ಯೆ ನಿಷೇಧ ಕಾಯ್ದೆಯ ಮರು ಪರಿಶೀಲನೆಗೆ ಸಿದ್ಧ: ಸಚಿವ ಮಾಧುಸ್ವಾಮಿ

ಬೆಂಗಳೂರು, ಜ. 13: ಕರ್ನಾಟಕ ಜಾನುವಾರು(ಗೋಹತ್ಯೆ ನಿಷೇಧ ಮಸೂದೆ) ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರ ಮುಕ್ತವಾಗಿದೆ. ಆದರೆ, ಹೈಕೋರ್ಟ್ ಸೂಚನೆ ನೀಡಿದರೆ ಮರು ಪರಿಶೀಲನೆಗೂ ಸಿದ್ಧವಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದ ಅಧ್ಯಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ನೀಡಿದ್ದು, ಇದಕ್ಕೆ ಸರಕಾರ ಉತ್ತರ ನೀಡಲಿದೆ ಎಂದರು.
ಗೋಹತ್ಯೆ ತಡೆಗಟ್ಟಲು ಯಾವುದೇ ಸಂದರ್ಭದಲ್ಲಿ ನೈತಿಕ ಪೊಲೀಸ್ಗಿರಿಗೆ ಸರಕಾರ ಅವಕಾಶ ನೀಡುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಹೈಕೋರ್ಟ್ ಸೂಚನೆಗಳನ್ನು ಸರಕಾರ ಪಾಲಿಸಲಿದೆ ಎಂದು ಅವರು ವಿವರಣೆ ನೀಡಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ