varthabharthi


ರಾಷ್ಟ್ರೀಯ

ಸಹೋದ್ಯೋಗಿಯಿಂದಲೇ ಅತ್ಯಾಚಾರ: ಮಹಿಳಾ ಕಾನ್‌ಸ್ಟೇಬಲ್ ಆರೋಪ

ವಾರ್ತಾ ಭಾರತಿ : 13 Jan, 2021

ಲಕ್ನೊ, ಜ.13: ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹೋದ್ಯೋಗಿ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳಾ ಕಾನ್‌ಸ್ಟೇಬಲ್ ಆರೋಪಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ಠಾಣೆಯಲ್ಲಿ ಈ ಘಟನೆ ನಡೆದಿದೆ.

ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್ ತನ್ನ ಮನೆಯನ್ನು ತೋರಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಪರಿಣಾಮ ನೆಟ್ಟಗಿರದು ಎಂದು ಬೆದರಿಸಿದ್ದಾನೆ ಎಂದು ಮಹಿಳಾ ಕಾನ್‌ಸ್ಟೆಬಲ್ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳಾ ಕಾನ್‌ಸ್ಟೆಬಲ್‌ರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ. ಆರೋಪಿ ಪೊಲೀಸ್ ಪರಾರಿಯಾಗಿದ್ದು ಆತನ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ಹೇಳಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)