ಕರಾವಳಿ
ಶಿರಾಡಿ : ತುಳು ಚಿತ್ರ ನಟ ರೂಪೇಶ್ ಶೆಟ್ಟಿ ಕಾರು ಅಪಘಾತ
ವಾರ್ತಾ ಭಾರತಿ : 13 Jan, 2021

ನೆಲ್ಯಾಡಿ : ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಢಿಕ್ಕಿಯಾದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಬುಧವಾರ ಸಂಜೆ ನಡೆದಿದೆ.
ಕಾರ್ಯಕ್ರಮದ ನಿಮಿತ್ತ ತನ್ನ ಗೆಳೆಯರ ಜೊತೆ ಬೆಂಗಳೂರಿಗೆ ತೆರಳುತ್ತಿದ್ದ ರೂಪೇಶ್ ಶೆಟ್ಟಿ ಸಂಚರಿಸುತ್ತಿದ್ದ ಕಾರು ಶಿರಾಡಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸ್ನೇಹಿತರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)