ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಆರೋಪಿ ಆದಿತ್ಯ ಆಳ್ವಗೆ ನ್ಯಾಯಾಂಗ ಬಂಧನ
ಬೆಂಗಳೂರು, ಜ.18: ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ಆಳ್ವಗೆ ನ್ಯಾಯಾಂಗ ಬಂಧನ ವಿಧಿಸಿ ನಗರದ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿಯ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋಮವಾರ ಆದಿತ್ಯ ಆಳ್ವನನ್ನು ಸಿಸಿಬಿ ಪೊಲೀಸರು ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಪೀಠ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು.
ಸದ್ಯ ಅನಾರೋಗ್ಯದಿಂದ ಬಳಲುತ್ತಿರುವ ಆರೋಪಿ ಆದಿತ್ಯ ಆಳ್ವಗೆ ಕಾರಾಗೃಹದ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕೋರ್ಟ್ ಸೂಚನೆ ನೀಡಿದೆ. ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆದಿತ್ಯ ಆಳ್ವ 6ನೆ ಆರೋಪಿಯಾಗಿದ್ದಾನೆ.
Next Story