varthabharthi


ಕರ್ನಾಟಕ

ಯಾವುದೇ ಸಚಿವರ ಖಾತೆಗಳಲ್ಲಿ ಬದಲಾವಣೆ ಇಲ್ಲ: ಆರ್.ಅಶೋಕ್

ವಾರ್ತಾ ಭಾರತಿ : 21 Jan, 2021

ಬೆಂಗಳೂರು, ಜ.21: ಸದ್ಯಕ್ಕೆ ಯಾವುದೇ ಸಚಿವರ ಖಾತೆಗಳಲ್ಲಿ ಬದಲಾವಣೆ ಆಗುವುದಿಲ್ಲ. ಕೆಲವರ ಖಾತೆ ಬದಲಾವಣೆ ಆಗಿದೆ. ಈ ಸಂಬಂಧ ಸಚಿವರ ಜೊತೆ ಮುಖ್ಯಮಂತ್ರಿ ಮಾತನಾಡಿದ್ದಾರೆ. ಸಚಿವರೆಲ್ಲರೂ ಮುಖ್ಯಮಂತ್ರಿಯ ಮಾತು ಕೇಳಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನು ನಿಭಾಯಿಸಲು ಮುಖ್ಯಮಂತ್ರಿ ಸಮರ್ಥರಿದ್ದಾರೆ. ಸಂಪುಟ ವಿಸ್ತರಣೆ ಆದಾಗ ಇಂತಹ ಗೊಂದಲಗಳು ಸಹಜ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲವನ್ನು ಸರಿ ಮಾಡುತ್ತಾರೆ. ಮಾಧುಸ್ವಾಮಿ ಮುಖ್ಯಮಂತ್ರಿಯಿಂದ ಅನುಮತಿ ಪಡೆದು ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿದ್ದರು. ಗೋಪಾಲಯ್ಯ ಹಾಗೂ ಎಂ.ಟಿ.ಬಿ.ನಾಗರಾಜ್ ನಮ್ಮ ಸಂಪರ್ಕದಲ್ಲಿದ್ದು ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)