varthabharthi


ನಿಧನ

ಬಾಬು ಪೂಜಾರಿ

ವಾರ್ತಾ ಭಾರತಿ : 22 Jan, 2021

ಮಂಗಳೂರು, ಜ.22: ರೈತ ಚಳವಳಿಯ ಹಿರಿಯ ನಾಯಕ, ಪಾವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಿರಿಯ ಸಿಪಿಎಂ ಮುಖಂಡ ಬಾಬು ಪೂಜಾರಿ ಭಂಡಾರ ಮನೆ(83) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

 ದೀರ್ಘ ಕಾಲದ ಅಸೌಖ್ಯದಿಂದ್ದ ಅವರು ಇಂದು ಮುಂಜಾನೆ ಪಾವೂರಿನ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಪಾವೂರಿನಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)