ಕರಾವಳಿ
ದ.ಕ. ಜಿಲ್ಲೆಯಲ್ಲಿ ಶನಿವಾರ 31 ಮಂದಿಗೆ ಕೊರೋನ ಪಾಸಿಟಿವ್
ವಾರ್ತಾ ಭಾರತಿ : 23 Jan, 2021
ಮಂಗಳೂರು, ಜ.23: ದ.ಕ. ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 31 ಮಂದಿಯಲಿ ಕೊರೋನ ಪಾಸಿಟಿವ್ ಕಂಡುಬಂದಿದ್ದು, 18 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,561 ಸೋಂಕಿತರ ಪೈಕಿ 32,558 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 738 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 265 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 26,850 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದುರ, 28,14,235 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)