varthabharthi


ರಾಷ್ಟ್ರೀಯ

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ

ಮಧ್ಯಪ್ರದೇಶ:ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಶ್ರುವಾಯು ಪ್ರಯೋಗ

ವಾರ್ತಾ ಭಾರತಿ : 23 Jan, 2021

ಭೋಪಾಲ,ಜ.23: ನೂತನ ಕೃಷಿಕಾನೂನುಗಳ ವಿರುದ್ಧ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರು ಮತ್ತು ನೂರಾರು ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಕಮಲನಾಥ ಅವರ ನೇತೃತ್ವದಲ್ಲಿ ಶನಿವಾರ ಇಲ್ಲಿಯ ರಾಜಭವನಕ್ಕೆ ಮುತ್ತಿಗೆ ಹಾಕಲು ಜವಾಹರ ಚೌಕ್‌ನಿಂದ ಜಾಥಾದಲ್ಲಿ ತೆರಳುತ್ತಿದ್ದಾಗ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಪ್ರಯೋಗಿಸಿದರು.

ಪ್ರತಿಭಟನಾನಿರತರನ್ನು ನಿಯಂತ್ರಿಸಲು ಸಾಧ್ಯವಾಗದ್ದರಿಂದ ಅವರನ್ನು ಚದುರಿಸಲು ಸೌಮ್ಯಸ್ವರೂಪದ ಬಲಪ್ರಯೋಗ ಅನಿವಾರ್ಯವಾಗಿತ್ತು. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಭೋಪಾಲದ ಡಿಐಜಿ ಇರ್ಷಾದ್ ವಲಿ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)