varthabharthi


ರಾಷ್ಟ್ರೀಯ

ಏಮ್ಸ್‌ನ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರ್ತಿಗೆ 2 ವರ್ಷ ಜೈಲು

ವಾರ್ತಾ ಭಾರತಿ : 23 Jan, 2021

ಹೊಸದಿಲ್ಲಿ, ಜ. 23: 2016ರಲ್ಲಿ ದಾಖಲಾಗಿದ್ದ ಏಮ್ಸ್ ಭದ್ರತಾ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಲ್ಲಿನ ನ್ಯಾಯಾಲಯ ಶನಿವಾರ ಆಪ್ ಶಾಸಕ ಸೋಮನಾಥ ಭಾರ್ತಿಗೆ 2 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿನ್ ದಂಡಾಧಿಕಾರಿ ರವೀಂದ್ರ ಕುಮಾರ್ ಪಾಂಡೆ ಅವರು ಸೋಮನಾಥ್ ಭಾರ್ತಿಗೆ 1 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದ್ದಾರೆ.

ಆದಾಗ್ಯೂ, ಪ್ರಕರಣದಲ್ಲಿ ದೋಷಿ ಎಂದು ಪರಿಗಣಿಸಿರುವುದು ಹಾಗೂ ಕಾರಾಗೃಹ ಶಿಕ್ಷೆಯ ವಿರುದ್ಧ ಉಚ್ಚ ನ್ಯಾಯಾಲಯದ ಮುಂದೆ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗುವಂತೆ ಸೋಮನಾಥ್ ಭಾರ್ತಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯ ಭಾರ್ತಿಯ ಸಹವರ್ತಿಗಳು ಹಾಗೂ ಸಹ ಆರೋಪಿಗಳಾದ ಜಗತ್ ಸೈನಿ, ದಿಲೀಪ್ ಝಾ, ಸಂದೀಪ್ ಸೋನು ಹಾಗೂ ರಾಕೇಶ್ ಪಾಂಡೆ ಅವರನ್ನು ಖುಲಾಸೆಗೊಳಿಸಿತು. ಏಮ್ಸ್‌ನ ಮುಖ್ಯ ಭದ್ರತಾ ಅಧಿಕಾರಿ ಆರ್.ಎಸ್. ರಾವತ್ ಸಲ್ಲಿಸಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)