ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಪ್ರಯಾಣಿಕರಿಂದ ಹಲ್ಲೆ: ದೂರು ದಾಖಲು
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.24: ಕ್ಷುಲ್ಲಕ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಘಟನೆ ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ನಿರ್ವಾಹಕ ಹರೀಶ್ ಅವರು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ನಗರಕ್ಕೆ ಹೊರಟಿದ್ದ ಬಸ್ನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಅವರ ವಸ್ತುಗಳ ವಿಚಾರವಾಗಿ ಸದಸ್ಯನೊಬ್ಬ ನಿರ್ವಾಹಕನೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕುಟುಂಬಸ್ಥರು ನಿರ್ವಾಹಕ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story