ಮಂಚಿ: ಮಾ.6, 7ರಂದು ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ
ಬಂಟ್ವಾಳ, ಜ.24: ಮಂಚಿಯ ‘ಗಲ್ಫ್ ಫ್ರೆಂಡ್ಸ್’ ಪ್ರಾಯೋಜಕತ್ವದಲ್ಲಿ ಮಾರ್ಚ್ 6 ಮತ್ತು 7ರಂದು ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಮಂಚಿ ನೂಜಿಬೈಲ್ ಶಾಲಾ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ 50 ಸಾವಿರ ರೂ. ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ 25 ಸಾವಿರ ರೂ. ನಗದು ಮತ್ತು ಟ್ರೋಫಿ ನೀಡಲಾಗುತ್ತದೆ. 5 ಸಾವಿರ ರೂ. ಪ್ರವೇಶ ಶುಲ್ಕ ಇರಲಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ. 7338554059, 9742040733 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story