varthabharthi


ಕರಾವಳಿ

ಉಡುಪಿ: ರವಿವಾರ 17 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾ ಭಾರತಿ : 24 Jan, 2021

ಉಡುಪಿ, ಜ.24: ರವಿವಾರ ಜಿಲ್ಲೆಯ ಒಟ್ಟು 17 ಮಂದಿ ಕೋವಿಡ್-19 ಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ನಾಲ್ವರು ಸೋಂಕಿನಿಂದ ಗುಣಮುಖ ರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 43ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಎಂಟು ಮಂದಿ ಪುರುಷರು ಹಾಗೂ 9 ಮಂದಿ ಮಹಿಳೆಯರು. ಇವರಲ್ಲಿ ಎಂಟು ಮಂದಿ ಉಡುಪಿ ತಾಲೂಕು, ಏಳು ಮಂದಿ ಕುಂದಾಪುರ ಮತ್ತು ಒಬ್ಬರು ಕಾರ್ಕಳ ತಾಲೂಕಿನವರು. ಶನಿವಾರ ನಾಲ್ವರು ಸೋಂಕಿನಿಂದ ಮುಕ್ತರಾಗುವ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಒಟ್ಟು ಸಂಖ್ಯೆ ಈಗ 23,039ಕ್ಕೇರಿದೆ.

726 ಮಂದಿ ನೆಗೆಟಿವ್: ಶನಿವಾರ ಜಿಲ್ಲೆಯ 745 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 726 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 19 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,271ಕ್ಕೇರಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,28,960 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,05,689 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 189 ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಇಂದು ಯಾರಿಗೂ ಕೋವಿಡ್-19 ಲಸಿಕೆಯನ್ನು ನೀಡಲಾಗಿಲ್ಲ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)