varthabharthi


ಕರಾವಳಿ

ತೊಕ್ಕೊಟ್ಟು: ಉಳ್ಳಾಲ ಬ್ಲಾಕ್ ಕಾಂಗ್ರೆಸ್‌ನಿಂದ ಜ.25ರಂದು ಪ್ರತಿಭಟನೆ

ವಾರ್ತಾ ಭಾರತಿ : 24 Jan, 2021

ಕೊಣಾಜೆ, ಜ.24: ಇತ್ತೀಚಿನ ದಿನಗಳಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಧಾರ್ಮಿಕ ಕೇಂದ್ರಗಳನ್ನು ಮಲಿನಗೊಳಿಸುವ ಹಾಗೂ ತೊಕ್ಕೊಟ್ಟು ಒಳಪೇಟೆ ಮಾಂಸದ ಅಂಗಡಿಗೆ ಬೆಂಕಿ ಹಚ್ಚಿರುವುದು ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಸಮಾಜದ ಸಾಮರಸ್ಯವನ್ನು ಹಾಳು ಮಾಡುವಂತಹ ಕೃತ್ಯಗಳು ನಡೆಯುತ್ತಿವೆ. ಇಂತಹ ದುಷ್ಕೃತ್ಯಗಳ ಹುನ್ನಾರವನ್ನು ಖಂಡಿಸಿ ಶಾಸಕ ಯು.ಟಿ.ಖಾದರ್ ನೇತೃತ್ವದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜ.25ರಂದು ಪೂರ್ವಾಹ್ನ 11ಕ್ಕೆ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)