varthabharthi


ರಾಷ್ಟ್ರೀಯ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಗೌರವ ವಂದನೆ ಸಲ್ಲಿಸಿದ ಪ್ರಧಾನಿ

ವಾರ್ತಾ ಭಾರತಿ : 24 Jan, 2021

ಹೊಸದಿಲ್ಲಿ, ಜ. 24: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾದ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.

ಹೆಣ್ಣು ಮಕ್ಕಳ ಸಶಕ್ತೀಕರಣ ಹಾಗೂ ಅವರು ಘನತೆ, ಅವಕಾಶದ ಜೀವನ ನಡೆಸಲು ಖಾತರಿ ನೀಡುವಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರನ್ನು ಅವರು ಪ್ರಶಂಸಿಸಿದ್ದಾರೆ.

 ಸಾಮಾಜಿಕ ಮಾದ್ಯಮದಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು ನಾವು ನಮ್ಮ ದೇಶದ ಹೆಣ್ಣು ಮಕ್ಕಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಅವರ ಸಾಧನೆಗೆ ಗೌರವ ವಂದನೆ ಸಲ್ಲಿಸುತ್ತೇವೆ. ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಲಭ್ಯ ಹಾಗೂ ಲಿಂಗತ್ವ ಸೂಕ್ಷ್ಮತೆಯನ್ನು ಸುಧಾರಿಸುವುದು ಸೇರಿದಂತೆ ಹೆಣ್ಣು ಮಕ್ಕಳ ಸಬಲೀಕರಣವನ್ನು ಕೇಂದ್ರೀಕರಿಸಿ ಕೇಂದ್ರ ಸರಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ’’ ಎಂದಿದ್ದಾರೆ.

ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರದ ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಸಚಿವಾಲಯ 2008ರಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆರಂಭಿಸಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)