varthabharthi


ಕರಾವಳಿ

ಉಳ್ಳಾಲ: ಹಿಟ್ ಆಂಡ್ ರನ್ ಪ್ರಕರಣ; ಆರೋಪಿಯ ಬಂಧನ

ವಾರ್ತಾ ಭಾರತಿ : 25 Jan, 2021

ಉಳ್ಳಾಲ: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಪರಾರಿಯಾಗಲೆತ್ನಿಸಿದ್ದ ವಾಹನವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ. 

ಈ ಲಾರಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಇದರಿಂದ ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.

ಅವರು ಬೆಳಗ್ಗೆ ತೊಕ್ಕೊಟ್ಟಿನ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. 

ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿ ಸಂಜೆಯೊಳಗೆ ಢಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಸೆರೆಸಿಕ್ಕ ದಾಖಲೆಗಳ ಆಧಾರದಲ್ಲಿ ತಲಪಾಡಿಯತ್ತ ತೆರಳುತ್ತಿದ್ದ ಮರಳು ಸಾಗಾಟದ ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನನ್ನು ಬಂಧಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)