ಕರಾವಳಿ
ಬೆಳ್ತಂಗಡಿ: ದೊಡ್ಡಪ್ಪನ ಮಗನಿಂದ ಬಾಲಕಿಯ ಅತ್ಯಾಚಾರ; ಆರೋಪ
ವಾರ್ತಾ ಭಾರತಿ : 25 Jan, 2021
ಬೆಳ್ತಂಗಡಿ, ಜ.24: ಹದಿಮೂರು ವರ್ಷದ ಬಾಲಕಿಯನ್ನು ದೊಡ್ಡಪ್ಪನ ಮಗ ಅತ್ಯಾಚಾರವೆಸಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪುಂಡೈ ಬನ ಮನೆ ಎಂಬಲ್ಲಿ ಘಟನೆ ನಡೆದಿದ್ದು, ಪ್ರವೀಣ್ ಎಂಬಾತ ಬಂಧಿತ ಆರೋಪಿ.
ಆಗಾಗ ಮನೆಗೆ ಬಂದು ಹೋಗುತ್ತಿದ್ದ ಬಾಲಕಿಯ ದೊಡ್ಡಪ್ಪನ ಮಗನಾಗಿರುವ ಪ್ರವೀಣ್ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ. ಜ.23ರಂದು ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದೆಗ ಆಕೆ 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಕುರಿತು ಬಾಲಕಿಯನ್ನು ವಿಚಾರಿಸಿದಾಗ ಸತ್ಯಾಂಶ ತಿಳಿದುಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)