ಬಾಲ ಗೌರವ ಪ್ರಶಸ್ತಿ- ಅರ್ಜಿ ಆಹ್ವಾನ
ಉಡುಪಿ, ಫೆ.13: ರಾಜ್ಯ ಬಾಲ ವಿಕಾಸ ಅಕಾಡೆಮಿ ವತಿಯಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲ ಗೌರವ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಂಗೀತ, ನೃತ್ಯ, ನಟನೆ, ಕ್ರೀಡೆ ಮತ್ತು ಚಿತ್ರಕಲೆ, ಕರಕುಶಲ, ಬರವಣಿಗೆ, ಸಂಶೋಧನೆ (ಹೊಸ ಆವಿಷ್ಕಾರ) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತ ಮಕ್ಕಳು, ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳು ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಯೋಜನಾಧಿಕಾರಿಗಳು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ ಇಲ್ಲಿಗೆ ಫೆ.20ರೊಳಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯೋಜನಾಧಿಕಾರಿಗಳು, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ ದೂರವಾಣಿ ಸಂಖ್ಯೆ: 0836-2461666ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story