varthabharthi


ನಿಧನ

ರಘುರಾಮ ಶಣೈ

ವಾರ್ತಾ ಭಾರತಿ : 22 Feb, 2021

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಯಳ್ತಿಮಾರ್ ಇಂಡಸ್ಟ್ರೀಸ್‌ನ ಮಾಲಕ ಹಿರಿಯ ಉದ್ಯಮಿ ರಘುರಾಮ ಶೆಣೈ(60) ಅವರು ಸೋಮವಾರ  ಹೃದಯಾಘಾತದಿಂದ  ನಿಧನರಾದರು.

ಪುತ್ತೂರು ನಗರದ ಕಲ್ಲಾರೆ ನಿವಾಸಿಯಾದ ರಘುರಾಮ ಶೆಣೈ ಅವರು ಪುತ್ತೂರಿನಲ್ಲಿ ಹಲವಾರು ವರ್ಷಗಳಿಂದ ಪ್ರಸಿದ್ಧ ಉದ್ಯಮಿಯಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಸೋಮವಾರ ಬೆಳಿಗ್ಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. 

ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)