varthabharthi


ಕರ್ನಾಟಕ

ರಾಜ್ಯದಲ್ಲಿ 317 ಹೊಸ ಕೊರೋನ ಪ್ರಕರಣ ದೃಢ: ಐವರು ಸಾವು

ವಾರ್ತಾ ಭಾರತಿ : 22 Feb, 2021

ಬೆಂಗಳೂರು, ಫೆ.22: ರಾಜ್ಯದಲ್ಲಿ ಸೋಮವಾರ 317 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5 ಜನರು ಸೋಂಕಿಗೆ ಬಲಿಯಾಗಿದ್ದು, 287 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,48,466ಕ್ಕೆ ತಲುಪಿದ್ದು, 128 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,299ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6,061ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಐದು ಸೋಂಕಿತರು ಬಲಿ: ಬೆಂಗಳೂರು ನಗರ 3, ಧಾರವಾಡ 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 317 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 181, ಚಿಕ್ಕಬಳ್ಳಾಪುರ 7, ಚಿತ್ರದುರ್ಗ 9, ದಕ್ಷಿಣ ಕನ್ನಡ 10, ದಾವಣಗೆರೆ 2, ಧಾರವಾಡ 7, ಕಲಬುರಗಿ 4, ಕೋಲಾರ 4, ಮಂಡ್ಯ 4, ಮೈಸೂರು 29, ಶಿವಮೊಗ್ಗ 5, ತುಮಕೂರು 17, ಉಡುಪಿ 14, ವಿಜಯಪುರ ಜಿಲ್ಲೆಯಲ್ಲಿ ಐದು ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 181 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಸೋಮವಾರದಂದು 181 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. 109 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 403943 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,454 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,95,104 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)