ಬೆಂಗಳೂರು
ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಆಘಾತಕಾರಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು, ಫೆ.23: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲಿ ಆರು ಮಂದಿ ಸಾವನ್ನಪ್ಪಿರುವುದು ಆಘಾತ ತಂದಿದೆ. ಘಟನೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸ್ಫೋಟದಲ್ಲಿ ಸಾವನ್ನಪ್ಪಿದ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. (1/2)
— CM of Karnataka (@CMofKarnataka) February 23, 2021
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ