varthabharthi


ಕರ್ನಾಟಕ

ಕೋಲಾರ: ಅನುಮತಿ ಇಲ್ಲದೆ ಪ್ರತಿಭಟನೆ ಆರೋಪ; ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ವಾರ್ತಾ ಭಾರತಿ : 25 Feb, 2021

ಕೋಲಾರ : ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿ ರಸ್ತೆ ತಡೆ ಮಾಡಿದ ಆರೋಪದಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ನಗರದ ಕ್ಲಾಕ್ ಟವರ್ ನಲ್ಲಿ  ಪಿಎಫ್ಐ ಕಾರ್ಯಕರ್ತರ ಮೇಲೆ‌ ಲಾಠಿ ಚಾರ್ಜ್ ನಡೆದಿದೆ. ಯುಪಿ ಪೊಲೀಸರಿಂದ ಕೇರಳ ಪಿಎಫ್ಐ ಕಾರ್ಯಕರ್ತರ ಬಂಧನ ಖಂಡಿಸಿ ಪಿಎಫ್ಐ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಏಳು ಮಂದಿ ಪಿಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)