varthabharthi


ಕರಾವಳಿ

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ.ಯೋಗೀಶ್ವರ್

ವಾರ್ತಾ ಭಾರತಿ : 26 Feb, 2021

ಮಂಗಳೂರು, ಫೆ.26: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.

ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ  ಸುದ್ದಿಗಾರರೊಂದಿಗೆ  ಅವರು ಮಾತನಾಡುತ್ತಿದ್ದರು.

ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆ ಅಲ್ಲಿ ಹೋಗುತ್ತಾರೆ. ಅವರದ್ದು ಅವಕಾಶವಾದಿ ರಾಜಕಾರಣ.   ಅವರು ಮುಖ್ಯಮಂತ್ರಿ ಆಗಿದ್ದಾಗ ಉದಾಸೀನದಿಂದ ಕಾಲ ಕಳೆದರು. ಈಗ ಕ್ಷೇತ್ರದ ಭೇಟಿ ಮಾಡಿ ಗೋಳಾಡುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿಗೆ ಹೋಗುವುದು ಅವರ ಗುಣ. ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆಯಾಗಲಿದ್ದಾರೆ. ಜೆಡಿಎಸ್ ನೆಲಕಚ್ಚಲಿದೆ ಎಂದು ಅವರು ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)