varthabharthi


ಕರಾವಳಿ

ಗುಂಡ್ಯ: ಹೆದ್ದಾರಿಯಲ್ಲಿ ಕಾಡಾನೆ ದಾಳಿ; ಲಾರಿ ಚಾಲಕ ಮೃತ್ಯು

ವಾರ್ತಾ ಭಾರತಿ : 26 Feb, 2021

ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ರಾ. ಹೆದ್ದಾರಿಯ ಬದಿಯಲ್ಲಿ ಶುಕ್ರವಾರ ಬೆಳಗ್ಗೆಯೂ ಕಾಡಾನೆ ಕಾಣಿಸಿಕೊಂಡಿದೆ.

ನೆಲ್ಯಾಡಿ, ಫೆ.26: ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತ ಲಾರಿ ಚಾಲಕನನ್ನು ರಾಜಸ್ಥಾನ ಮೂಲದವನೆಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅದರ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)