varthabharthi


ಕರಾವಳಿ

ಮಂಗಳೂರು: ಬಾಲಕಿಯ ಅತ್ಯಾಚಾರ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ವಾರ್ತಾ ಭಾರತಿ : 26 Feb, 2021

ಮಂಗಳೂರು, ಫೆ.26: ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 ನ್ಯಾಯಾಲಯವು ಕಠಿಣ ಶಿಕ್ಷೆ ನೀಡಿ, ಶುಕ್ರವಾರ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ಶಿಬಾಜೆಯ ನವೀನ(28) ಎಂಬಾತ ಶಿಕ್ಷೆಗೆ ಒಳಗಾದವ. ಈತ ಮದುವೆಯಾಗುವುದಾಗಿ ನಂಬಿಸಿ 2017ರಲ್ಲಿ ತನ್ನ ಸಂಬಂಧಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಾವಿತ್ರಿ ವೆಂಕಟರಮಣ ಭಟ್, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಐಪಿಸಿ ಕಲಂ 376ರನ್ವಯ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ 5,000 ರೂ.. ದಂಡ, ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದ ಮಂಡಿಸಿದ್ದರು. 16 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ಡಿಎನ್‌ಎ ವರದಿ ಪ್ರಕರಣಕ್ಕೆ ಪೂರಕವಾಗಿ ಪ್ರಮುಖ ಸಾಕ್ಷಿಯಾಗಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)