varthabharthi


ಕರಾವಳಿ

ಮಂಗಳೂರು: ಅನರ್ಹರು ಬಿಪಿಎಲ್ ಕಾರ್ಡ್ ಮರಳಿಸಲು ತಹಶೀಲ್ದಾರ್ ಸೂಚನೆ

ವಾರ್ತಾ ಭಾರತಿ : 26 Feb, 2021

ಮಂಗಳೂರು, ಫೆ.26: ಪಡಿತರ ಚೀಟಿ ಪಡೆದಿರುವ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂದಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯದಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ತಿಳಿಸಿದ್ದಾರೆ.

ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು (ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ಮೇಲ್ಪಟ್ಟವರು, ನಾಲ್ಕು ಚಕ್ರದ ವಾಹನ ಸ್ವಂತಕ್ಕಾಗಿ ಬಳಸುವವರು, ಸರಕಾರಿ/ ಅರೆ ಸರಕಾರಿ/ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹೊಂದಿರುವವರು, ನಗರ ಪ್ರದೇಶದಲ್ಲಿ 1000 ಚದರ ಅಡಿ ವಿಸ್ತೀರ್ಣ ಅಥವಾ ಹೆಚ್ಚಿನ ವಿಸ್ತೀರ್ಣದ ವಾಸದ ಮನೆ ಹೊಂದಿರುವ ಕುಟುಂಬಗಳು) ಕೂಡಲೇ ತಮ್ಮ ಬಿಪಿಎಲ್/ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ಆಹಾರ ಇಲಾಖೆಗೆ ಹಾಜರುಪಡಿಸಬೇಕು.

ಮರಣ ಹೊಂದಿದ ಪಡಿತರ ಚೀಟಿ ಸದಸ್ಯರ ಹೆಸರನ್ನು ಸಹ ಚೀಟಿಯಿಂದ ಕೂಡಲೇ ತೆಗೆಸಿ ದಾಖಲೆಯನ್ನು ಇಲಾಖೆಗೆ ಹಾಜರುಪಡಿಸಲು ಮಾ.15ರವರೆಗೆ ಕೊನೆಯ ಅವಕಾಶ ನೀಡಲಾಗಿದೆ ಎಂದು ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)