varthabharthi


ಮಾಹಿತಿ - ಮಾರ್ಗದರ್ಶನ

ಮಾಸಿಕ ವ್ಯಾಸಂಗ ವೇತನ ಫೆಲೋಶಿಪ್‍ಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ವಾರ್ತಾ ಭಾರತಿ : 27 Feb, 2021

ಧಾರವಾಡ, ಫೆ.27: 2020-21ನೆ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ.3 ಕೊನೆಯ ದಿನವಾಗಿದೆ. ಅಂದು ಸಂಜೆ 5:30ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೆಟ್: https://bcwkaranatak.gov.in ಅಥವಾ ಸಹಾಯವಾಣಿ 0836-2447961 ಮೂಲಕ ಸಂಪರ್ಕಿಸಬಹುದು ಎಂದು ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)