varthabharthi


ಕರ್ನಾಟಕ

ರಾಜ್ಯದಲ್ಲಿ 349 ಹೊಸ ಕೊರೋನ ಪ್ರಕರಣ ದೃಢ: ಐವರು ಸಾವು

ವಾರ್ತಾ ಭಾರತಿ : 1 Mar, 2021

ಬೆಂಗಳೂರು, ಮಾ.1: ರಾಜ್ಯದಲ್ಲಿ ಸೋಮವಾರದಂದು 349 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5  ಜನರು ಸೋಂಕಿಗೆ ಬಲಿಯಾಗಿದ್ದು, 324 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,51,600ಕ್ಕೆ ತಲುಪಿದ್ದು, 118 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,336 ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 5,824 ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಐದು ಸೋಂಕಿತರು ಬಲಿ: ಬೆಂಗಳೂರು ನಗರ 4, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 349 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 8, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 210, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 210 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಸೋಮವಾರದಂದು 210 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ. 110 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 4,05,847 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,483 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,97,271 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)