varthabharthi


ಕರಾವಳಿ

ದ.ಕ. ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾ ಭಾರತಿ : 7 Mar, 2021

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ‌ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಮಂಗಳೂರಿನ ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಕ್ರೀಡಾಂಗಣದಲ್ಲಿ  ಮಂಗಳೂರು ಪೋಲಿಸ್ ಆಯುಕ್ತ ಎನ್ .ಶಶಿಕುಮಾರ್ ಉದ್ಘಾಟಿಸಿದರು.

ಅವರು ಮಾತನಾಡಿ ವರ್ಷ ವಿಡೀ ಪತ್ರಕರ್ತರು ಹಾಗೂ ಪೊಲೀಸರು ಕರ್ತವ್ಯ ದಲ್ಲಿರುತ್ತಾರೆ. ಅವರಿಗೆ ಇಂತಹ ಕ್ರೀಡಾ ಕೂಟ ದೈಹಿಕ ಆರೋಗ್ಯಕ್ಕೆ ಸಹಕಾರಿ ಎಂದರು.

ಸಮಾಜದ ಓರೆಕೋರೆ ತಿದ್ದುವವರು ಪತ್ರಕರ್ತರು. ಸಂಘಟನೆ ಸಂಘಟಿತವಾಗಿದ್ದರೆ ಗುರುತಿಸಿಕೊಳ್ಳಲು ಅಸಾಧ್ಯ ಎಂದವರು ಅಭಿಪ್ರಾಯಿಸಿದರು.

ಏಷ್ಯ ನ್ ಪತ್ರಕರ್ತರ ಸಂಘದ ಮದನ್ ಗೌಡ ಮಾತನಾಡಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯಚಟುವಟಿಕೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಹೊರಗಡೆಯಿಂದ ವಿಭಿನ್ನ ಅನಿಸಿಕೆ ಹೊಂದಿದ್ದರೂ ಮಂಗಳೂರು ಸೌಹಾರ್ದ ನೆಲ ಎಂದು ಹೇಳಿದರು.

ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ,  ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ. ಕೆ, ಕೆಯುಡಬ್ಲ್ಯುಜೆ  ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಹಿರಿಯ ಪತ್ರಕರ್ತ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ   ವಂದಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)