ಡಾ.ಬಾಬು ಜಗಜೀವನ ರಾಮ್ ಜನ್ಮ ದಿನಾಚರಣೆ: ಮುಖ್ಯಮಂತ್ರಿಯಿಂದ ಗೌರವಾರ್ಪಣೆ
ಬೆಂಗಳೂರು, ಎ.5: ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 114ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.