varthabharthi


ಬೆಂಗಳೂರು

​ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ

ಎಸ್ಮಾ ಜಾರಿಗೆ ಚಿಂತನೆ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾ ಭಾರತಿ : 7 Apr, 2021

ಬೆಂಗಳೂರು, ಎ.7: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ನೌಕರರು ತಮ್ಮ ಹಠಮಾರಿ ಧೋರಣೆ ಬಿಡಬೇಕು. ಮುಷ್ಕರಕ್ಕೆ ಸಂಬಂಧಿಸಿ ಎಸ್ಮಾ ಜಾರಿಗೆ ಚಿಂತನೆ ಮಾಡುತ್ತಿದ್ದೇವೆ. ಪರಿಸ್ಥಿತಿಯನ್ನು ನೋಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಷ್ಕರ ಕೈಬಿಟ್ಟು ಬಂದರೆ ಮಾತುಕತೆಗೆ ಸರಕಾರ ಸಿದ್ಧವಿದೆ, ಸಾರಿಗೆ ಮುಷ್ಕರವನ್ನು ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ. ಹಠ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಈಗಾಗಲೇ ಅವರ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ ಎಂದರು.

ಸಾರಿಗೆ ನೌಕರರು ತಮ್ಮ ಹಠಮಾರಿ ಧೋರಣೆ ಬಿಡಬೇಕು. ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ನಡುವೆ ಖಾಸಗಿ ಬಸ್ ಗಳು ಹೆಚ್ಚಿನ ಮೊತ್ತದ ಪ್ರಯಾಣ ದರ ವಸೂಲಿ ಮಾಡಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)