ಬಸ್ ಮುಷ್ಕರ: ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮ ಅನಿವಾರ್ಯ ಎಂದ ಸಿಎಂ ಯಡಿಯೂರಪ್ಪ
ಬೆಳಗಾವಿ, ಎ.7: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಕೈಗೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೊಮ್ಮೆ ನೌಕರರಲ್ಲಿ ಹೋರಾಟ ಕೈಬಿಡಲು ಮನವಿ ಮಾಡಿದ್ದು, ಒಪ್ಪದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ಶೇ.8 ವೇತನ ಹೆಚ್ಚಳಕ್ಕೆ ಒಪ್ಪಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಮತ್ತೊಂದು ಹಂತದ ಸಭೆ ನಡೆಸಿ ನೌಕರರ ಮನವೊಲಿಕೆಗೆ ಪ್ರಯತ್ನಿಸುತ್ತೇನೆ. ಕೊನೆಯ ಬಾರಿಗೆ ವಿನಂತಿ ಮಾಡುತ್ತಿದ್ದೇನೆ. ಒಪ್ಪದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದರು.
Next Story