varthabharthi


ಕ್ರೀಡೆ

ಮುಂಬೈ ವಿರುದ್ಧದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ

14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಚಾಲನೆ

ವಾರ್ತಾ ಭಾರತಿ : 9 Apr, 2021

File Photo

ಚೆನ್ನೈ: ಕೊರೋನ ವೈರಸ್‌ನ ಎರಡನೇ ಅಲೆ ದೇಶಾದ್ಯಂತ ವೇಗವಾಗಿ ಬೀಸುತ್ತಿರುವ ನಡುವೆಯೇ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ತಮಿಳುನಾಡಿನ ರಾಜಧಾನಿಯಲ್ಲಿ ಶುಕ್ರವಾರ ಆರಂಭವಾಗಿದೆ.

ಕೇವಲ ಐದು ತಿಂಗಳ ಹಿಂದೆ ಮುಂಬೈ ಇಂಡಿಯನ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಜಯಿಸಿದ್ದು, ಇದೀಗ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಕಲರವ ಆರಂಭವಾಗಿದೆ. 2020ರಲ್ಲಿ ಯುಎಇನಲ್ಲಿ ನಡೆದಿದ್ದ ಐಪಿಎಲ್ ಈ ಬಾರಿ ಭಾರತಕ್ಕೆ ವಾಪಸ್ ಆಗಿದೆ.

ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದ್ದು, ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಪ್ರಶಸ್ತಿಯ ಮೇಲೆ ದೃಷ್ಟಿ ಹರಿಸಿದ್ದರೆ, ವಿರಾಟ್ ಕೊಹ್ಲಿ ಆರ್‌ಸಿಬಿಯ ಕಳಪೆ ಪ್ರದರ್ಶನ ಕೊಂಡಿಯನ್ನು ತುಂಡರಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

ಬೆಂಗಳೂರು ತಂಡ: ವಿರಾಟ್ ಕೊಹ್ಲಿ (ನಾಯಕ), ರಜತ್ ಪಾಟೀದಾರ್, ಎಬಿಡಿ ವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಡ್ಯಾನಿಯಲ್ ಕ್ರಿಸ್ಟಿಯನ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಕೈಲ್ ಜೇಮಿಸನ್, ಶಹಬಾಜ್ ಅಹ್ಮದ್, ಮುಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್

ಮುಂಬೈ ತಂಡ: ರೋಹಿತ್ ಶರ್ಮಾ (ನಾಯಕ) ಕ್ರಿಸ್ ಲಿನ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ಕೀರಾನ್ ಪೊಲಾರ್ಡ್, ಕೃಣಾಲ್ ಪಾಂಡ್ಯ, ರಾಹುಲ್ ಚಹರ್, ಮಾರ್ಕೊ ಜಾನ್ಸೆನ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬೂಮ್ರಾ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)